ಸಾಮಾಜಿಕ ಕಾರ್ಯಕರ್ತ ಪ್ರವೀಣಕುಮಾರ್ ದೇಶಪಾಂಡೆ ಪತ್ರಕ್ಕೆ ಸ್ಪಂದಿಸಿದ ಪ್ರಧಾನಿ ಕಚೇರಿ

ಒಟ್ಟು ವೀಕ್ಷಣೆಗಳು : 269
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಹುಕ್ಕೇರಿ: ಅವರಗೋಳ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಅವ್ಯವಸ್ಥೆಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪ್ರವೀಣಕುಮಾರ್ ದೇಶಪಾಂಡೆ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ ಜುಲೈ 29, 2019 ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಶಾಲೆಯ ಅವ್ಯವಸ್ಥೆಯ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಪತ್ರ ಬರೆದಿದ್ದಾರೆ. ಸಾಮಾಜಿಕ ಕಾರ್ಯಕರ್ತ ಪ್ರವೀಣಕುಮಾರ್ ದೇಶಪಾಂಡೆ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು