ಚಾಲಕನ ಬೆವರಿಳಿಸಿದ ಶಾಸಕಿ ಅಂಜಲಿ ನಿಂಬಾಳ್ಕರ

ಒಟ್ಟು ವೀಕ್ಷಣೆಗಳು : 158
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಖಾನಾಪುರ: ಜಾಂಬೋಟಿ ಮಾರ್ಗವಾಗಿ ಗೋವಾಗೆ ತೆರಳುವ ರಸ್ತೆಯ ಮದ್ಯೆ ಶಾಸಕಿ ಅಂಜಲಿ ನಿಂಬಾಳ್ಕರ ಒರ್ವ್ ಲಾರಿ ಚಾಲಕನಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ. ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಸೇತುವೆ ಹಾನಿಗೆ ಒಳಗಾಗಿದೆ ಆ ಹಾನಿಗೊಳಗಾದ ಸೇತುವೆಯ ಮೇಲೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂಬ ಎಚ್ಚರಿಕೆಯ ಫಲಕವಿದೆ ಆದರೂ, ಲಾರಿ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ಚಾಲಕನಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ, ಮೊದಲು ಲಾರಿ ಹಿಂದೆ ತೆಗೆದುಕೊ, ಲಾರಿಯನ್ನು ರಸ್ತೆ ಮದ್ಯೆಯೇ ನಿಲ್ಲಿಸಿ ಹೋಗು ಇಲ್ಲದಿದ್ದರೆ ಪಂಚರ್ ಮಾಡುತ್ತೆನೆಂದು ಲಾರಿ ಚಾಲಕನ ವಿರುದ್ಧ ಅಂಜಲಿ ನಿಂಬಾಳ್ಕರ ಗರಂ ಆಗಿದ್ದಾರೆ. ಈ ಹಿಂದೆ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಬಸ್ ನಲ್ಲಿ ಹತ್ತಿಸಿಕೊಳ್ಳಲು ನಿರ್ಲಕ್ಷ ತೋರಿದ್ದ ಸರಕಾರಿ ಬಸ್ ಚಾಲಕ-ನಿರ್ವಾಹಕರಿಗೆ ಅಂಜಲಿ ನಿಂಬಾಳ್ಕರ ಕ್ಲಾಸ್ ತೆಗೆದುಕೊಂಡಿದ್ದರು ಈಗ ಲಾರಿ ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಶಾಸಕಿಯ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು